ಬೆಂಗಳೂರು, ಜೂ. 10 (DaijiworldNews/SM): ದ.ಕ. ಜಿಲ್ಲೆ ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ ಜೂನ್ 21ರ ತನಕ ಲಾಕ್ ಡೌನ್ ವಿಸ್ತರಣೆಗೊಳಿಸಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ಈ 11 ಜಿಲ್ಲೆಗಳಲ್ಲಿ ಪ್ರಸ್ತುತ ಇರುವ ಮಾರ್ಗಸೂಚಿಯನ್ನೇ ಮುಂದುವರೆಸಲು ನಿರ್ಧರಿಸಲಾಗಿದೆ ಎಂದು ಸಿಎಂ ಘೋಷಣೆ ಮಾಡಿದ್ದಾರೆ.
ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಮಂಡ್ಯ, ಶಿವಮೊಗ್ಗ, ದಾವಣಗೆರೆ, ಹಾಸನ, ಮೈಸೂರು, ಬೆಳಗಾವಿ, ಕೊಡಗು, ಚಾಮರಾಜನಗರ, ದ.ಕ. ಜಿಲ್ಲೆಗಳಲ್ಲಿ ಲಾಕ್ ಡೌನ್ ವಿಸ್ತರಿಸಿದಲಾಗಿದೆ ಎಂದು ಸಿಎಂ ಘೋಷಣೆ ಮಾಡಿದ್ದಾರೆ. ಅಲ್ಲದೆ, ಈ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಜಿಲ್ಲೆಯ ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಲು ಅವಕಾಶ ನೀಡಲಾಗಿದೆ.
ಉಳಿದ ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮ ಜೂನ್ 14ರ ಬಳಿಕ ಸಡಿಲಿಕೆಗೊಳಿಸಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ.