ನವದೆಹಲಿ, ಜೂ.11 (DaijiworldNews/HR): ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 91,702 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,92,74,823ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, ದೇಶದಲ್ಲಿ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆ ಕಂಡಿದ್ದು, ಒಂದೇ ದಿನದಲ್ಲಿ 3,403 ಜನರು ಬಲಿಯಾಗಿ ಇದುವರೆಗೂ ದೇಶದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 3,63,079ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 11,21,671 ಕೊರೊನಾ ಸಕ್ರಿಯ ಪ್ರಕರಣಗಳಿದ್ದು 2,77,90,073 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,34,580 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಭಾರತದಲ್ಲಿ ಈವರೆಗೆ 24,60,85,649 ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ.