ಬೆಂಗಳೂರು, ಜೂ 11 (DaijiworldNews/MS): ರಾಜ್ಯದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದ್ದು, ಆನ್ ಲೈನ್ ಮೂಲಕ ಪರೀಕ್ಷೆ ನಡೆಸುವಂತೆ ಎಲ್ಲಾ ಕಾಲೇಜುಗಳಿಗೆ ಶಿಕ್ಷಣ ಇಲಾಖೆ ಸುತ್ತೋಲೆ ಕಳುಹಿಸಿದೆ.
ಸುತ್ತೋಲೆಯಲ್ಲಿ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಎರಡು ವಿಷಯಗಳಿಗೆ ಪರೀಕ್ಷೆ ನೀಡಲು ಸೂಚನೆ ನೀಡಲಾಗಿದೆ. ಈ ಹಿಂದೆ ಶಿಕ್ಷಣ ಸಚಿವ ಸಚಿವ ಸುರೇಶ್ ಕುಮಾರ್ ಅವರು ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಉತ್ತೀರ್ಣರೆಂದು ಘೋಷಿಸಿದ್ದರೂ ಇದೀಗ ಆನ್ಲೈನ್ ಪರೀಕ್ಷೆ ಕಡ್ಡಾಯ ಎಂದು ಇಲಾಖೆ ತಿಳಿಸಿದೆ ಪಿಯು ಬೋರ್ಡ್, ಎರಡು ಮಾದರಿಯ ಪ್ರಶ್ನೆ ಪತ್ರಿಕೆ ರೂಪಿಸಿದ್ದು, ಪಿಯು ಬೋರ್ಡ್ ವೆಬ್ಸೈಟ್ನಲ್ಲಿ ಮಾದರಿ ಪ್ರಶ್ನೆ ಪತ್ರಿಕೆ ಲಭ್ಯವಿರಲಿದೆ.
ಆನ್ಲೈನ್ ಪರೀಕ್ಷೆ ಹೇಗೆ ನಡೆಯುತ್ತದೆ?
ಇಲಾಖೆಯ ವೆಬ್ಸೈಟ್ನಲ್ಲಿರುವ ಪ್ರಶ್ನೆ ಪತ್ರಿಕೆಯನ್ನು ವಿದ್ಯಾರ್ಥಿಗಳು ಡೌನ್ಲೋಡ್ ಮಾಡಿಕೊಂಡು ಉತ್ತರ ಬರೆದು ವಾಟ್ಸ್ಆಪ್, ಇಮೇಲ್ ಅಂಚೆ ಮೂಲಕ ಉಪನ್ಯಾಸಕರಿಗೆ ಉತ್ತರ ಪತ್ರಿಗಳನ್ನು ಕಳುಹಿಸಬೇಕು.
ಉತ್ತರ ಪತ್ರಿಕೆ ಉಪನ್ಯಾಸಕರು ಮೌಲ್ಯಮಾಪನ ಮಾಡಿ ಸ್ಟೂಡೆಂಟ್ಸ್ ಅಚಿವ್ ಮೆಂಟ್ ಟ್ರಾಕಿಂಗ್ ಸಿಸ್ಟಂ ಫಲಿತಾಂಶವನ್ನು ಅಪ್ಲೋಡ್ ಮಾಡಬೇಕಾಗುತ್ತದೆ. ಅಸೆಸ್ಮೆಂಟ್ ವಿಧದಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಮೊದಲ ಅಸೆಸ್ಮೆಂಟ್ಗೆ ಜೂನ್ 20 ಕೊನೆಯ ದಿನವಾಗಿದ್ದು, ಉಪನ್ಯಾಸಕರು ಜೂನ್ 25ರೊಳಗೆ ಮೌಲ್ಯಮಾಪನ ಮಾಡುವಂತೆ ಸೂಚಿಸಲಾಗಿದೆ. ಎರಡನೇ ಅಸೆಸ್ಮೆಂಟ್ಗೆ ಜೂನ್ 26 ಕೊನೆ ದಿನವಾಗಿದ್ದು, ಜುಲೈ 5ರ ಒಳಗೆ ಮೌಲ್ಯಮಾಪನ ನಡೆಸಲಾಗುತ್ತದೆ. ಮೌಲ್ಯಮಾಪನದ ವೇಳೆ ವಿದ್ಯಾರ್ಥಿಗಳಿಗೆ ಪ್ರತೀ ವಿಷಯದಲ್ಲಿ ಕನಿಷ್ಠ 35 ಅಂಕ ಕಡ್ಡಾಯವಾಗಿ ನೀಡಬೇಕಾಗುತ್ತದೆ.