ಬೆಂಗಳೂರು, ಜೂ.11 (DaijiworldNews/HR): ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ದಲಿತ ಕವಿ, ಬಂಡಾಯ ಸಾಹಿತಿ ಡಾ. ಸಿದ್ದಲಿಂಗಯ್ಯ( (67)) ಅವರು ಇಂದು ನಿಧನರಾಗಿದ್ದಾರೆ.
ಕಳೆದ ತಿಂಗಳು ಸಿದ್ದಲಿಂಗಯ್ಯ ಅವರಿಗೆ ಕೆಮ್ಮು ಮತ್ತು ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಮೇ 2ರಂದು ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟು ರಂಗದೊರೈ ಆಸ್ಪತ್ರೆಗೆ ದಾಖಲಾಗಿ ಬಳಿಕ ಮೇ 5ರಂದು ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.
1954ರಲ್ಲಿ ಮಾಗಡಿ ತಾಲೂಕಿನ ಮಂಚನಬೆಲೆ ಗ್ರಾಮದಲ್ಲಿ ಸಿದ್ದಲಿಂಗಯ್ಯ ಅವರು ಜನಿಸಿದ್ದು, ವಿದ್ಯಾರ್ಥಿ ದೆಸೆಯಲ್ಲಿಯೇ ಇವರು ಉತ್ತಮ ಭಾಷಣಕಾರರಾಗಿದ್ದರು.
ಇನ್ನು ಅಂಬೇಡ್ಕರ್, ಪೆರಿಯಾರ್, ವಸುದೇವಭೂಪಾಲ, ಲೋಹಿಯಾ ಮುಂತಾದವರ ವಿಚಾರಧಾರೆಗಳಿಂದ ಆಕರ್ಷಿತರಾಗಿದ್ದರು.