ಬೆಂಗಳೂರು, ಜೂ. 11 (DaijiworldNews/SM): ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಕೆಯಾಗಿದ್ದು, ಶುಕ್ರವಾರದಂದು ಹೊಸದಾಗಿ 8249 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ರಾಜ್ಯದಲ್ಲಿ ಹೊಸದಾಗಿ 8249 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 159 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 14975 ಮಂದಿ ಶುಕ್ರವಾರದಂದು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
ಇಲ್ಲಿಯ ತನಕ ರಾಜ್ಯದಲ್ಲಿ 2747539 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 203769 ಮಂದಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. 2511105 ಮಂದಿ ಇಲ್ಲಿಯ ತನಕ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 32644 ಮಂದಿ ಇಲ್ಲಿಕ ತನಕ ಸೋಂಕಿಗೆ ಬಲಿಯಾಗಿದ್ದಾರೆ.