ನವದೆಹಲಿ, ಜೂ 12 (DaijiworldNews/MS): ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಕೆಯ ಹಾದಿ ಮುಂದುವರೆದಿದ್ದು, ಶನಿವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯಾವಾದ 24 ಗಂಟೆಗಳ ಅವಧಿಯಲ್ಲಿ 84,332 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದು 70 ದಿನಗಳ ನಂತರ ಕಡಿಮೆ ಸಂಖ್ಯೆಯಾಗಿದೆ. ಇನ್ನು ಸೋಂಕಿನಿಂದ 4,002 ಮಂದಿ ಸಾವನ್ನಪ್ಪಿದ್ದಾರೆ.
ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,93,59,155ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3,67,081 ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 10,80,690 ಕ್ಕೆ ಇಳಿಕೆಯಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ ,1,21,311 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,79,11,384 ಕ್ಕೆ ತಲುಪಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 24,96,00,304 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.