ಮೈಸೂರು, ಜೂ 12 (DaijiworldNews/PY): ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಪರ ಆನ್ಲೈನ್ ಕ್ಯಾಂಪೇನ್ ನಡೆಯುತ್ತಿದ್ದು, ರೋಹಿಣಿ ಸಿಂಧೂರಿ ಅವರನ್ನು ಮತ್ತೆ ಮೈಸೂರಿಗೆ ಜಿಲ್ಲಾಧಿಕಾರಿಯಾಗಿ ನೇಮಕ ಮಾಡುವಂತೆ ಒತ್ತಾಯಿಸಿ ಚೇಂಜ್ ಆರ್ಗ್ ಸಂಸ್ಥೆಯಿಂದ ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ ಅಭಿಯಾನ ಆರಂಭವಾಗಿದೆ.
ಈಗಾಗಲೇ ಸುಮಾರು 26 ಸಾವಿರ ಮಂದಿಯಿಂದ ಸಹಿ ಸಂಗ್ರಹ ಮಾಡಲಾಗಿದ್ದು, ರೋಹಿಣಿ ಸಿಂಧೂರಿ ಅವರನ್ನು ಮತ್ತೆ ಮೈಸೂರಿಗೆ ಜಿಲ್ಲಾಧಿಕಾರಿಯಾಗಿ ನೇಮಕ ಮಾಡುವಂತೆ ಮನವಿ ಮಾಡಲಾಗುತ್ತಿದೆ. ಸಹಿ ಸಂಗ್ರಹ ಅಭಿಯಾನದ ಮೂಲಕ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಮನವಿ ಮಾಡಿದೆ ಎನ್ನಲಾಗಿದೆ.
35 ಸಾವಿರ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಆನ್ಲೈನ್ ಅಭಿಯಾನ ಮುಂದುವರೆಯಲಿದೆ ಎಂದು ಅಭಿಯಾನ ಆಯೋಜಕರು ತಿಳಿಸಿದ್ದಾರೆ.
ಐಎಎಸ್ ಅಧಿಕಾರಿಗಳಾದ ಶಿಲ್ಪನಾಗ್ ಹಾಗೂ ರೋಹಿಣಿ ಸಿಂಧೂರಿ ಅಸಮಾಧಾನ ವ್ಯಕ್ತವಾದ ಬಳಿಕ ಇಬ್ಬರೂ ಅಧಿಕಾರಿಗಳನ್ನು ಕಳೆದ ಒಂದು ವಾರದ ಹಿಂದೆ ವರ್ಗಾವಣೆ ಮಾಡಿದ್ದು, ಬೇರೆ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.