ಜಮ್ಮು-ಕಾಶ್ಮೀರ, ಜೂ.12 (DaijiworldNews/HR): ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರೆಯಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಇಬ್ಬರು ಪೊಲೀಸರು ಹಾಗೂ ನಾಗರಿಕರೊಬ್ಬರು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಸಾಂಧರ್ಭಿಕ ಚಿತ್ರ
ಶಂಕಿತ ಭಯೋತ್ಪಾದಕರ ದಾಳಿಯಲ್ಲಿ ಇಬ್ಬರು ಪೊಲೀಸರು ಹಾಗೂ ನಾಗರಿಕರೊಬ್ಬರು ಗಾಯಗೊಂಡಿರುವುದಾಗಿ ಭದ್ರತಾ ಪಡೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನು ಶನಿವಾರ ಉತ್ತರ ಕಾಶ್ಮೀರದ ಸೋಪೋರೆ ಮತ್ತು ಅರಾಂಪೋರಾ ಪ್ರದೇಶದಲ್ಲಿ ಪೊಲೀಸರು ಮತ್ತು ಸಿಆರ್ಪಿಎಫ್ ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಶಂಕಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವುದಾಗಿ ತಿಳಿಸಿದೆ.
ಭಯೋತ್ಪಾದಕರನ್ನು ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ಮುಂದುವರಿದಿರುವುದಾಗಿ ವರದಿಯಾಗಿದೆ.