ಬೆಂಗಳೂರು, ಜೂ.12 (DaijiworldNews/HR): ಕಾಂಗ್ರೆಸ್ ಪಕ್ಷದ ಮುಖಂಡರು ಕ್ಲಬ್ಹೌಸ್ ಆ್ಯಪ್ ಮೂಲಕ ದೇಶ ವಿರೋಧಿ ಮಾತನ್ನಾಡುವ ನಾಚಿಗೆಗೆಟ್ಟ ಸಂದರ್ಶನ ನೀಡಿದ್ದು, ಕಾಂಗ್ರೆಸ್ ಪಾಕಿಸ್ತಾನದ ಪರ ಇರುವುದು ಸ್ಪಷ್ಟಗೊಳ್ಳುತ್ತಿದೆ. ಆದ್ದರಿಂದ ಕಾಂಗ್ರೆಸ್ನ ಹೆಸರನ್ನು ಇಂಡಿಯನ್ ನ್ಯಾಶನಲ್ ಕಾಂಗ್ರೆಸ್ ಪಾರ್ಟಿ (ಐಎನ್ಸಿ) ಹೆಸರಿನ ಬದಲಾಗಿ "ಆ್ಯಂಟಿ ನ್ಯಾಶನಲ್ ಕ್ಲಬ್ಹೌಸ್" ಎಂದು ಬದಲಿಸಿಕೊಳ್ಳಲಿ ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದ್ದಾರೆ.
ಈ ಕುರಿತು ಮಾತನಾಧಿದ ಅವರು, "ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು, ಕಾಂಗ್ರೆಸ್ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಜಮ್ಮು- ಕಾಶ್ಮೀರಕ್ಕೆ 370ನೇ ವಿಧಿಯಡಿ ವಿಶೇಷ ಸ್ಥಾನಮಾನ ಕೊಡುವ ಮಾತನ್ನಾಡಿದದು, ಇದು ಕಾಂಗ್ರೆಸ್ ಟೂಲ್ಕಿಟ್ನ ಇನ್ನೊಂದು ಭಾಗವಾಗಿದೆ" ಎಂದರು.
"ದೇಶದ ಪ್ರತಿಷ್ಠೆ ಮಣ್ಣು ಪಾಲು ಮಾಡುವುದು, ಪ್ರಧಾನಿಯವರ ಘನತೆಗೆ ಧಕ್ಕೆ ತರುವ ದುರುದ್ದೇಶ ಇದರ ಹಿಂದಿದದು, ಟೂಲ್ಕಿಟ್ ವಿಷಯದಲ್ಲಿ ಈಗಾಗಲೇ ಬಿಜೆಪಿ, ಕಾಂಗ್ರೆಸ್ಸಿಗರ ದುರುದ್ದೇಶವನ್ನು ಜನರ ಗಮನಕ್ಕೆ ತಂದಿದೆ. ದಿಗ್ವಿಜಯ್ ಸಿಂಗ್ ಹೇಳಿಕೆಯಿಂದ ಆ ಪಕ್ಷವು ಚೀನಾ- ಪಾಕಿಸ್ತಾನದ ಜೊತೆ ನಿಂತಿರುವುದು ಸ್ಪಷ್ಟಗೊಳ್ಳುತ್ತದೆ" ಎಂದು ಆರೋಪಿಸಿದ್ದಾರೆ.
ಇನ್ನು "ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಕ್ಕಿಳಿಸಬೇಕು ಮತ್ತು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಈ ಹಿಂದೆ ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್ ಅವರೂ ಪಾಕಿಸ್ತಾನದಲ್ಲಿ ಸಂದರ್ಶನವೊಂದರಲ್ಲಿ ತಿಳಿಸಿದ್ದು,ಅದನ್ನು ಕೇಳಿ ಟಿ.ವಿ. ಆಂಕರ್ ಆತಂಕಗೊಂಡಿದ್ದರು. ಇದರಲ್ಲಿ ನಮ್ಮ ಪಾತ್ರ ಏನಿದೆ ಎಂಬ ಪ್ರಶ್ನೆ ಮುಂದಿಟ್ಟಿದ್ದರು. ಇದು ಕಾಂಗ್ರೆಸ್ಸಿಗರ ಷಡ್ಯಂತ್ರವಲ್ಲದೆ ಮತ್ತೇನು? ಎಂದು ಪ್ರಶ್ನಿಸಿದ್ದಾರೆ.