ಬೆಂಗಳೂರು, ಜೂ.12 (DaijiworldNews/HR): ಕರ್ನಾಟಕದಲ್ಲಿ ಶನಿವಾರ 9,785 ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 27,57,324ಕ್ಕೆ ಏರಿಕೆಯಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಾರ, ಕಳೆದ 24 ಗಂಟೆಯಲ್ಲಿ 144 ಮಂದಿ ಸೋಂಕಿಗೆ ಬಲಿಯಾಗಿದ್ದು, ರಾಜ್ಯದಲ್ಲಿ ಕೊರೊನಾದಿಂದ ಒಟ್ಟು ಮೃತಪಟ್ಟವರ ಸಂಖ್ಯೆ 32,788ಕ್ಕೆ ಏರಿಕೆಯಾಗಿದೆ.
ಇನ್ನು ರಾಜ್ಯದಲ್ಲಿ ಇಂದು ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 25,32,719ಕ್ಕೆ ಏರಿಕೆಯಾಗಿದೆ.
ಕರ್ನಾಟಕದಲ್ಲಿ ಇಂದು 1,48,027 ಕೊರೊನಾ ಪರೀಕ್ಷೆ ನಡೆಸಲಾಗಿದ್ದು, 9,785 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.