ನವದೆಹಲಿ, ಜೂ. 13 (DaijiworldNews/HR): ಭಾರತದಲ್ಲಿ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 80,834 ಹೊಸ ಕೊರೊನಾ ಪ್ರಕರಣಗಳು ಕಂಡು ಬಂದಿದ್ದು, 3,303 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ಸಾಂಧರ್ಭಿಕ ಚಿತ್ರ
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,94,39,989ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3,70,384ಕ್ಕೆ ಏರಿಕೆಯಾಗಿದೆ.
24 ಗಂಟೆಗಳಲ್ಲಿ 1,32,062 ಮಂದಿ ಗುಣಮುಖರಾಗಿದ್ದು, ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,80,43,446ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 19,20,477 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, 37,62,32,162 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.
ಭಾರತದಲ್ಲಿ ಇಲ್ಲಿಯವರೆಗೂ ಒಟ್ಟಾರೆ 25,31,95,048 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.