ಬೆಂಗಳೂರು, ಜೂ. 13 (DaijiworldNews/SM): ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಕೆಯಾಗುತ್ತಿದ್ದು, ರವಿವಾರದಂದು 7810 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 125 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಇನ್ನು ಗುಣಮುಖರಾಗುತ್ತಿರುವವರ ಸಂಖ್ಯೆಯೂ ಕೂಡ ಉತ್ತಮವಾಗಿದ್ದು, ರವಿವಾರದಂದು 18648 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇಲ್ಲಿಯ ತನಕ ಒಟ್ಟು 2765134 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 2551365 ಮಂದಿ ಗುಣಮುಖರಾಗಿದ್ದಾರೆ. 32913 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 180835 ಮಂದಿ ಪ್ರಸ್ತುತ ಚಿಕಿತ್ಸೆಯಲ್ಲಿದ್ದಾರೆ.
ಇನ್ನು ಬೆಂಗಳೂರು ನಗರದಲ್ಲಿ 1348 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 23 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.