ನವದೆಹಲಿ, ಜೂ 14 (DaijiworldNews/PY): ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 70,421 ಮಂದಿಗೆ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,95,10,410ಕ್ಕೆ ಏರಿಕೆಯಾಗಿದೆ.
ಸಾವಿನ ಸಂಖ್ಯೆಯಲ್ಲಿಯೂ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 3,921 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈವರೆಗೆ ದೇಶದಲ್ಲಿ ಕೊರೊನಾ ಸೋಂಕಿಗೆ 3,74,305 ಮಂದಿ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಕಳೆದ 24 ಗಂಟೆಯಲ್ಲಿ 1,19,501 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಒಟ್ಟು 2,81,62,947 ಮಂದಿ ಸೋಂಕಿರು ಗುಣಮುಖರಾಗಿದ್ದಾರೆ. ದೇಶದಲ್ಲಿ ಸದ್ಯ 9,73,158 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಇಲ್ಲಿಯವರೆಗೆ 25,48,49,301 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ.