ತಿರುವನಂತಪುರ, ಜೂ 14 (DaijiworldNews/PY): ಕೇರಳದ ಪಾಲಕ್ಕಾಡ್ ಜಿಲ್ಲೆಯ ಅಲತ್ತೂರ್ ಕ್ಷೇತ್ರದ ಕಾಂಗ್ರೆಸ್ ಸಂಸದೆ ರಮ್ಯಾ ಹರಿದಾಸ್ ಆರೋಪಿಸಿದ್ದು, "ಎಡ ಪಕ್ಷದ ಕಾರ್ಯಕರ್ತರು ತಮಗೆ ನಿಂದಿಸಿದ್ದಾರೆ. ಅಲ್ಲದೇ, ಜೀವ ಬೆದರಿಕೆಯೊಡಿದ್ದಾರೆ" ಎಂದಿದ್ದಾರೆ.
"ಅಲತ್ತೂರ್ ಗ್ರಾ.ಪಂ.ಯ ಮಾಜಿ ಅಧ್ಯಕ್ಷ ಸೇರಿದಂತೆ ಇತರ ಏಳು ಜನ ತನ್ನನ್ನು ನಿಂದಿಸಿದ್ದಾರೆ. ಅಲ್ಲದೇ, ಜೀವ ಬೆದರಿಕೆ ಹಾಕಿದ್ದಾರೆ. ಕೆಲವು ಕಾರ್ಯಕರ್ತರೊಂದಿಗೆ ಕೊರೊನಾ ವಿರುದ್ದದ ಹೋರಾಟಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ" ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಕಾಂಗ್ರೆಸ್ ಸಂಸದೆ ರಮ್ಯಾ ಹರಿದಾಸ್ ತಿಳಿಸಿದ್ದಾರೆ.
ಘಟನೆಯ ಬಗ್ಗೆ ಪ್ರತಿಭಟಿಸಿ ರಸ್ತೆಯಲ್ಲಿ ಧರಣಿ ನಡೆಸಿದ ನಂತರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.