ನವದೆಹಲಿ, ಜೂ.14 (DaijiworldNews/HR): 2020ರಲ್ಲಿ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸೋತ ಬಳಿಕ ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷಕ್ಕೆ (ಎಲ್ಜೆಪಿ) ಮತ್ತೊಂದು ಸಂಕಷ್ಟ ಎದುರಾಗಿದೆ.
ಲೋಕಸಭೆಯಲ್ಲಿ ಸಂಸದೀಯ ಪಕ್ಷದ ನಾಯಕ ಸ್ಥಾನದಿಂದ ಚಿರಾಗ್ ಪಾಸ್ವಾನ್ ಅವರನ್ನು ತೆಗೆದುಹಾಕಲು ಎಲ್ಜೆಪಿಯ ಆರು ಸಂಸದರಲ್ಲಿ ಐವರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.
ಇನ್ನು ಚಿರಾಗ್ ಪಾಸ್ವಾನ್ ಅವರ ಸ್ಥಾನಕ್ಕೆ ಹಾಜಿಪುರ ಸಂಸದ ಪಶುಪತಿ ಕುಮಾರ್ ಪಾರಸ್ ಅವರನ್ನು ಆಯ್ಕೆ ಮಾಡುವ ತೀರ್ಮಾನವನ್ನು ಸಂಸದರು ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಲೋಕಸಭಾ ಸ್ವೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿರುವ ಎಲ್ಜೆಪಿ ಸಂಸದರು ಈ ಕುರಿತು ಪತ್ರವೊಂದನ್ನು ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.