ಬೆಂಗಳೂರು, ಜೂ 14(DaijiworldNews/MS): ರಾಜ್ಯದಲ್ಲಿ ಕೋವಿಡ್ ನಿಂದ ಮೃತಪಟ್ಟ ಬಿಪಿಎಲ್ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ 1 ಲಕ್ಷ ಪರಿಹಾರವನ್ನು ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಜೂ.೧೪ ರ ಸೋಮವಾರ ಘೋಷಿಸಿದ್ದಾರೆ.
ಈ ಬಗ್ಗೆ ಪತ್ರಿಕಾಗೋಷ್ಟಿ ನಡೆಸಿ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟಂತ ಪ್ರತಿ ಬಿಪಿಎಲ್ ಕಾರ್ಡ್ ದಾರರ ಕುಟುಂಬಗಳಿಗೆ, ಸರ್ಕಾರದಿಂದ ಒಂದು ಕುಟುಂಬಕ್ಕೆ ಒಬ್ಬರಿಗೆ 1 ಲಕ್ಷ ಪರಿಹಾರ ನೀಡಲು ನಿರ್ಧಾರಿಸಲಾಗಿದೆ ಎಂದು ಹೇಳಿದ್ದಾರೆ
ಪರಿಹಾರವು ಬಿಪಿಎಲ್ ಪಡಿತರದಾರರಿಗೆ ಮಾತ್ರ ಅನ್ವಯವಾಗಲಿದೆ. ಬಿಪಿಎಲ್ ಪಡಿತರದಾರ ಕುಟುಂಬದ ವಯಸ್ಕರು ಮೃತಪಟ್ಟಿದ್ದರೆ ಒಬ್ಬರಿಗೆ ಪರಿಹಾರ ನೀಡುತ್ತೇವೆ . ಕೋವಿಡ್ ಸೊಂಕಿನಿಂದ ದುಡಿಯುವ ವ್ಯಕ್ತಿಗಳು ಮೃತ ಪಟ್ಟು ಅನೇಕ ಕುಟುಂಬಗಳು ತೀರಾ ಕಷ್ಟದಲ್ಲಿದೆ. ಇದನ್ನು ಮನಗಂಡು ದುಡಿಯುವ ವ್ಯಕ್ತಿ ಮೃತ ಪಟ್ಟರೇ ಒಂದು ಕುಟುಂಬಕ್ಕೆ ಒಬ್ಬರಂತೆ ಒಂದು ಲಕ್ಷ ರೂ ನೀಡಲಾಗುತ್ತದೆ. ಬಿಪಿಎಲ್ ಕುಟುಂಬಗಳ ವಯಸ್ಕರು ಮೃತ ಪಟ್ಟಿದ್ರೆ ಒಂದು ಕುಟುಂಬಕ್ಕೆ ಒಬ್ಬರಂತೆ 1 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ
ಇದೇ ಸಂದರ್ಭದಲ್ಲಿ ಅಪಘಾತದಿಂದ ನಿಧನರಾದಂತ ಸಂಚಾರಿ ವಿಜಯ್ ಅವರ ಕುಟುಂಬಕ್ಕೆ ನೋವು ಭರಿಸುವಂತ ಶಕ್ತಿ ಕೊಡಲಿ ಎಂಬುದಾಗಿ ಸಂತಾಪ ವ್ಯಕ್ತಪಡಿಸಿದರು.