ಜೈಪುರ, ಜೂ 14 (DaijiworldNews/PY): ರಾಜಸ್ಥಾನದ ಚಿತ್ತೋರ್ಗಡ ಜಿಲ್ಲೆಯಲ್ಲಿ ಜಾನುವಾರು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಎಂಟು ಮಂದಿಯ ಗುಂಪೊಂದು ಓರ್ವನ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ್ದು, ಮತ್ತೋರ್ವನನ್ನು ತೀವ್ರವಾಗಿ ಗಾಯಗೊಳಿಸಿರುವ ಘಟನೆ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಹತ್ಯೆಗೀಡಾದ ವ್ಯಕ್ತಿಯನ್ನು ಬಾಬು ಭಿಲ್ (25) ಎಂದು ಗುರುತಿಸಲಾಗಿದೆ. ತೀವ್ರ ಗಾಯಗೊಂಡ ವ್ಯಕ್ತಿ ಪಿಂಟು ಭಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಏಳು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ರವಿ ಮೆಹರ್ಡಾ, ಬಂಧಿತರ ವಿರುದ್ದ ಕೊಲೆ ಪ್ರಕರಣ ದಾಖಲಾಗಿದೆ ಎಂದಿದ್ದಾರೆ.