ಬೆಂಗಳೂರು, ಜೂ. 14 (DaijiworldNews/SM): ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಸೋಮವಾರದಂದು 6835 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಮತ್ತೊಂದೆಡೆ ಸಾವಿನ ಸಂಖ್ಯೆಯಲ್ಲೂ ಇಳಿಕೆಯಾಗಿದ್ದು, ಸೋಮವಾರ 120 ಮಂದಿ ಸೋಮವಾರದಂದು ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಚೇತರಿಕೆಯ ಪ್ರಮಾಣವೂ ಕೂಡ ಉತ್ತಮವಾಗಿದ್ದು, ಸೋಮವಾರದಂದು 15409 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
ಇನ್ನು ರಾಜ್ಯದಲ್ಲಿ ಇಲ್ಲಿಯ ತನಕ 2771969 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 2566774 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. 172141 ಮಂದಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ.