ಬೆಂಗಳೂರು, ಜೂ. 14 (DaijiworldNews/SM): ಮುಂದಿನ ತಿಂಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸುವ ಕುರಿತಂತೆ ರಾಜ್ಯ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದು, ಲಾಕ್ ಡೌನ್ ತೆರವಾದ ತಕ್ಷಣದಿಂದ ಶಿಕ್ಷಕರು ಶಾಲೆಗಳಿಗೆ ಭೌತಿಕವಾಗಿ ಹಾಜರಾಗಲು ಅವಕಾಶವಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಶೈಕ್ಷಣಿಕ ಚಟುವಟಿಕೆ ನಡೆಸಲು ಶಿಕ್ಷಕರು ಶಾಲೆಗಳಿಗೆ ತೆರಳಬೇಕಾಗಿದೆ. ಜೂನ್ 15ರಿಂದ ದಾಖಲಾತಿ ಪ್ರಕ್ರಿಯೆಗಳನ್ನು ನಡೆಸಲು ಅನುಮತಿ ನೀಡಲಾಗಿದೆ. ಆದರೆ, ಲಾಕ್ ಡೌನ್ ನಿಯಮಗಳು ಅಡ್ಡಿಯುಂಟಾಗಿವೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು ಶಾಲೆಗಳಿಗೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ. ಲಾಕ್ ಡೌನ್ ಪೂರ್ಣಗೊಂಡ ನಂತರ ಶಿಕ್ಷಕರು ಶಾಲೆಗಳಿಗೆ ಹಾಜರಾಗುವಂತೆ ಸುತ್ತೋಲೆ ಹೊರಡಿಸಬೇಕೆಂದು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ.
ಮತ್ತೊಂದೆಡೆ ಪ್ರಥಮ ಪಿಯುಸಿ ಮೌಲ್ಯಮಾಪನ ಪ್ರಕ್ರಿಯೆಗೆ ಅವಧಿ ನೀಗಬೇಕು. ಎಲ್ಲಾ ಜಿಲ್ಲೆಗಳ ಲಾಕ್ ಡೌನ್ ಅವಧಿ ಪೂರ್ಣಗೊಳ್ಳುವ ತನಕ ಸಮಯ ವಿಸ್ತರಿಸಬೇಕೆಂದು ಉಪನ್ಯಾಸ ಸಂಘಟನೆ ಮನವಿ ಮಾಡಿದ್ದು, ಅದಕ್ಕೆ ಅವಕಾಶ ಕಲ್ಪಿಸಿ ಆದೇಶ ನೀಡಿದ್ದಾರೆ. ಶಿಘ್ರದಲ್ಲೇ ಈ ಬಗ್ಗೆ ಕ್ರಮ ಪದವಿಪೂರ್ವ ಶಿಕ್ಷಕರು ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.