ಬೆಂಗಳೂರು, ಜೂ 15( DaijiworldNews/MS): ಕೊರೊನಾದಿಂದ ಮೃತಪಟ್ಟ ವ್ಯಕ್ತಿಗಳ ಬಿಪಿಎಲ್ ಕುಟುಂಬಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಐದುಲಕ್ಷ ರೂ. ಪರಿಹಾರ ನೀಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಬಗ್ಗೆ ತಮ್ಮ ಅಧಿಕೃತ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೊರೊನಾದಿಂದ ಮೃತಪಟ್ಟ ವ್ಯಕ್ತಿಗಳ ಬಿಪಿಎಲ್ ಕುಟುಂಬಕ್ಕೆ ಸಿಎಂ ಯಡಿಯೂರಪ್ಪ ಒಂದು ಲಕ್ಷ ರೂ. ಪರಿಹಾರವನ್ನು ವಿಪತ್ತು ನಿರ್ವಹಣಾ ನಿಯಮಕ್ಕೊಳಪಡಿಸಿ ಐದು ಲಕ್ಷ ರೂಪಾಯಿಗೆ ಹೆಚ್ಚಿಸಬೇಕೆಂದು ಒತ್ತಾಯಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಕೊರೊನಾ ಸಾಂಕ್ರಮಿಕ ರೋಗವನ್ನು ಈಗಾಗಲೇ ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಲಾಗಿದೆ. ಆದ್ದರಿಂದ ವಿಪತ್ತು ಪರಿಹಾರದ ನಿಯಮಗಳಡಿ ಮೃತ ವ್ಯಕ್ತಿಗಳ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಪರಿಹಾರ ನೀಡಲು ಸಾಧ್ಯ ಇದೆ. ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟು ಈ ಅವಕಾಶವನ್ನು ರಾಜ್ಯ ಸರ್ಕಾರ ಬಳಸಿಕೊಳ್ಳಬೇಕು ಎಂದು ಹೇಳಿದ್ದಾರೆ.