ನವದೆಹಲಿ, ಜೂ 15 (DaijiworldNews/PY): ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 60,471 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 60,471 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಖಿತರ ಸಂಖ್ಯೆ 2,95,70,881 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 2,726 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟು 3,77,031 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಕಳೆದ 24 ಗಂಟೆಯಲ್ಲಿ 1,17,525 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 2,82,80,472 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಸದ್ಯ ದೇಶದಲ್ಲಿ 9,13,378 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 25,90,44,072 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.