ರಾಯಚೂರು, ಜೂ.15 (DaijiworldNews/HR): ಪೋಷಕರೇ ಮಗಳನ್ನು ಬಲವಂತವಾಗಿ ದೇವದಾಸಿ ಪದ್ಧತಿಗೆ ನೂಕಲು ಮುಂದಾಗಿದ್ದು, ಪೋಷಕರ ವಿರುದ್ಧವೇ ಯುವತಿ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ಜಾಲಹಳ್ಳಿ ಗ್ರಾಮವೊಂದರಲ್ಲಿ ನಡೆದಿದೆ.
ಸಾಂಧರ್ಭಿಕ ಚಿತ್ರ
ಪೋಷಕರೇ 21 ವರ್ಷದ ಯುವತಿಯನ್ನು ದೇವದಾಸಿ ಪದ್ಧತಿಗೆ ದೂಡಲು ಮುಂದಾದಾಗ ಯುವತಿ ವಿರೋಧ ವ್ಯಕ್ತಪಡಿಸಿದ್ದಾಳೆ.
ಇನ್ನು ಅಕ್ಕನ ಗಂಡನೊಂದಿಗೆ ಯುವತಿ ಮದುವೆ ಮಾಡಲು ಪೋಷಕರು ಮುಂದಾಗಿದ್ದು, ಯುವತಿ ವಿರೋಧಿಸಿದಾಗ ದೇವದಾಸಿ ಮಾಡುವುದಾಗಿ ಬೆದರಿಕೆ ಹಾಕಿದ್ದು, ಇದರಿಂದ ನೊಂದ ವಿದ್ಯಾರ್ಥಿನಿ ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆದು, ಸಿಡಿಪಿಒಗೆ ಮಾಹಿತಿ ನೀಡಿ, ಜಾಲಹಳ್ಳಿ ಠಾಣೆ ಪೊಲೀಸರಿಗೆ ದೂರು ನೀಡಿದ್ದಾಳೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.
ಸದ್ಯಕ್ಕೆ ಯುವತಿ ದೇವದುರ್ಗದ ಮಹಿಳಾ ಪುನರ್ವಸತಿ ಆಶ್ರಯ ಪಡೆದುಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.