ನವದೆಹಲಿ, ಜೂ 15 (DaijiworldNews/PY): ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ಜೆಎನ್ಯು ವಿದ್ಯಾರ್ಥಿಗಳಾದ ನತಾಶಾ ನರ್ವಾಲ್, ದೇವಂಗನಾ ಕಲಿತಾ ಹಾಗೂ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾಲಯದ ವಿದ್ಯಾರ್ಥಿ ಆಸಿಫ್ ಇಕ್ಬಾಲ್ ತನ್ಹಾಗೆ ಮಂಗಳವಾರ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ.
ಸಾಂದರ್ಭಿಕ ಚಿತ್ರ
ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ಮೃದುಲ್ ಹಾಗೂ ಅನೂಪ್ ಜೈರಾಮ್ ಬಂಭಾನಿ ಅವರನ್ನೊಳಗೊಂಡ ನ್ಯಾಯಪೀಠ ಮೇನ್ಮನವಿ ವಿಚಾರಣೆ ನಡೆಸಿದ್ದು, ಮೂವರು ಆರೋಪಿಗಳಿಗೆ ಜಾಮೀನು ನೀಡಿದೆ.
ಜಾಮೀನು ನೀಡುವ ಸಂದರ್ಭ ನ್ಯಾಯಾಲಯ, "ಪಿಂಜ್ರಾ ಟೊಡ್ ಸಂಘಟನೆಯ ಕಾರ್ಯಕರ್ತರಾಗಿರುವ ನರ್ವಾಲಾ, ಕಾಳಿತಾ ಹಾಗೂ ತನ್ಹಾ ಅವರಿಗೆ ತಮ್ಮ ಪಾಸ್ಪೋರ್ಟ್ಗಳನ್ನು ನ್ಯಾಯಾಲಯಕ್ಕೆ ನೀಡಬೇಕು. ಸಾಕ್ಷ್ಯಗಳನ್ನು ಪ್ರಚೋದಿಸಬಾರದು ಹಾಗೂ ನಾಶಪಡಿಸುವಂತಿಲ್ಲ" ಎಂದು ತಿಳಿಸಿದೆ.
ಕಳೆದ ವರ್ಷದ ಮೇ ತಿಂಗಳಿನಲ್ಲಿ ಈ ಮೂವರು ವಿದ್ಯಾರ್ಥಿಗಳನ್ನು ಕಠಿಣ ಕಾನೂನುಬಾಹಿರ ಚಟುವಟಿಕೆಗಳು ಕಾಯ್ದೆಯಡಿ ಪೊಲೀಸರು ಬಂಧಿಸಿದ್ದರು. ಪ್ರಕರಣದ ಸಂಬಂಧ ಮೂವರು ಆರೋಪಿಗಳಿಗೆ ವಿಚಾರಣಾ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿತ್ತು. ನ್ಯಾಯಾಲಯದ ಈ ಆದೇಶದ ವಿರುದ್ದ ಆರೋಪಿಗಳು ದೆಹಲಿ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
ಸಿಎಎ ಕಾಯ್ದೆ ಬೆಂಬಲಿಸುವವರ ಹಾಗೂ ವಿರೋಧಿಸುವವರ ನಡುವೆ ಫೆ.24ರಂದು ಘರ್ಷಣೆ ನಡೆದಿದ್ದು, ಹಿಂಸಾರೂಪ ಪಡೆದುಕೊಂಡಿತ್ತು. ಘಟನೆಯಲ್ಲಿ 53 ಮಂದಿ ಮೃತಪಟ್ಟಿದ್ದು, 200 ಮಂದಿ ಗಾಯಗೊಂಡಿದ್ದರು.