ನವದೆಹಲಿ, ಜೂ 16 (DaijiworldNews/PY): ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 62,224 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 62,224 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದು, ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 2,96,33,105ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿಗೆ 2,542 ಮಂದಿ ಬಲಿಯಾಗಿದ್ದು, ಒಟ್ಟು 3,79,573 ಮಂದಿ ಸೋಂಕಿಗೆ ಬಲಿಯಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ 1,07,628 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಒಟ್ಟು 2,83,88,100 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಸದ್ಯ ದೇಶದಲ್ಲಿ 8,65,432 ಸಕ್ರಿಯ ಪ್ರಕರಣಗಳಿವೆ. ಕಳೆದ ಕಳೆದ 24 ಗಂಟೆಗಳಲ್ಲಿ 28,00,458 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದ್ದು, ಒಟ್ಟು 26,19,72,014 ಮಂದಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.