ಬೆಂಗಳೂರು, ಜೂ. 16 (DaijiworldNews/SM): ರಾಜ್ಯದಲ್ಲಿ ಬುಧವಾರದಂದು ಸೋಂಕಿತರ ಸಂಖ್ಯೆ ಹೆಚ್ಚಳವಾಗಿದ್ದು, 7345 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಮತ್ತೊಂದೆಡೆ 148 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.
17913 ಬುಧವಾರದಂದು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಇನ್ನು ಇಲ್ಲಿಯ ತನಕ ರಾಜ್ಯದಲ್ಲಿ ಒಟ್ಟು 2784355 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಈ ಪೈಕಿ 2599472 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 33296 ಮಂದಿ ಇಲ್ಲಿಯ ತನಕ ಸೋಂಕಿಗೆ ಬಲಿಯಾಗಿದ್ದಾರೆ.
ಮತ್ತೊಂದೆಡೆ ಬೆಂಗಳೂರು ನಗರದಲ್ಲಿ 1611 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.