ಬೆಂಗಳೂರು, ಜೂ. 16 (DaijiworldNews/SM): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮ್ಮುಖದಲ್ಲಿ ಮಂತ್ರಿಗಳ ಸಭೆ ನಡೆದಿದ್ದು, ಈ ಸಭೆಯಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚೆಯಾಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ರಾಜ್ಯ ಸರಕಾರ ಉತ್ತಮವಾದ ಕಾರ್ಯ ನಿರ್ವಹಿಸುತ್ತಿದೆ. ಸೇವೆ, ಸಂಘಟನೆ ಹಾಗೂ ರಾಜ್ಯದಲ್ಲಿ ನಡೆದಿರುವ ಎಲ್ಲಾ ಕಾರ್ಯಗಳ ವರದಿಗಳನ್ನು ನೀಡಲಾಗಿದೆ. ಸರಕಾರದ ಕಡೆಯಿಂದಾಗಿರುವ ಕೆಲಸದ ವರದಿಯನು ಪಡೆಯಲಾಗಿದೆ. ರಾಜ್ಯದಲ್ಲಿ ಸರಕಾರ ಹಾಗೂ ಸಂಘಟನೆ ಉತ್ತಮವಾಗಿ ಕೆಲಸ ನಿರ್ವಹಿಸಿದೆ ಎಂಬುವುದನ್ನು ಅರುಣ್ ಸಿಂಗ್ ಹೇಳಿದ್ದಾರೆ. ವಿಶೇಷವಾಗಿ ಮಂತ್ರಿಗಳು ಉತ್ತಮವಾಗಿ ಕಾರ್ಯ ವೈಖರಿ ಹೊಂದಿದ್ದಾರೆ ಎಂದು ಅವರು ತಿಳಿಸಿದ್ದಾರೆ.