ಬೆಂಗಳೂರು, ಜೂ. 16 (DaijiworldNews/SM): ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ನೇತೃತ್ವದಲ್ಲಿ ಸಿಎಂ ಹಾಗೂ ಸಚಿವರು, ಶಾಸಕರ ಮಹತ್ವದ ಸಭೆ ನಡೆದಿದ್ದು, ಸಭೆಯಲ್ಲಿ ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆದಿದೆ. ಮತ್ತೊಂದೆಡೆ ಬಂಡಾಯ ಎದ್ದಿದ ಬಣ ಸೈಲೆಂಟ್ ಆಗಿದೆ.
ಜನರಿಗೆ ಉತ್ತಮ ಆಡಳಿತ ನೀಡುವುದು ಹೇಗೆ, ಸರ್ಕಾರದ ಆಡಳಿತದಲ್ಲಿ ಪ್ರಗತಿಯ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಕೇಂದ್ರ ಸರ್ಕಾರದ ಯೋಜನೆಗಳನ್ನು ಜಿಲ್ಲೆ, ತಾಲ್ಲೂಕು, ಗ್ರಾಮ ಮಟ್ಟಗಳವರೆಗೆ ಹೇಗೆ ಜನರಿಗೆ ತಲುಪಿಸಬೇಕು, ಪ್ರಚಾರ ಮಾಡಬೇಕು, ಸಚಿವರು, ಶಾಸಕರು ಹೇಗೆ ಒಗ್ಗೂಡಿ ಕೆಲಸ ಮಾಡಬೇಕೆಂಬುದರ ಬಗ್ಗೆ ಚರ್ಚಿಸಲಾಯಿತು ಎಂದರು.
ಇನ್ನು ಪಕ್ಷದಲ್ಲಿ ಯಾವುದೇ ಸಚಿವರಿಗೆ, ಶಾಸಕರಿಗೆ ಏನಾದರೂ ಭಿನ್ನಾಭಿಪ್ರಾಯಗಳಿದ್ದಲ್ಲಿ ಅದನ್ನು ಸೇರವಾಗಿ ಮಾಧ್ಯಮದ ಮುಂದೆ ಹೇಳದೆ ಪಕ್ಷದ ಹಿರಿಯರ ಗಮನಕ್ಕೆ ತರುವಂತೆ ಸೂಚಿಸಿದ್ದೇನೆ ಎಂದು ಅರುಣ ಸಿಂಗ್ ತಿಳಿಸಿದ್ದಾರೆ.