ನವದೆಹಲಿ, ಜೂ.17 (DaijiworldNews/HR): ದೇಶದಲ್ಲಿ ಕೊರೊನಾ ಪ್ರಕರಣ ಇಳಿಕೆ ಕಂಡಿದ್ದು, ಕಳೆದ 24 ಗಂಟೆಗಳಲ್ಲಿ 67,208 ಕೊರೊನಾ ಸೋಂಕು ದೃಢಪಟ್ಟಿದ್ದು, 2,330 ಮಂದಿ ಸಾವನ್ನಪ್ಪಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 67,208 ಮಂದಿಗೆ ಸೋಂಕು ದೃಢಪಟ್ಟಿದ್ದು, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,97,00,313ಕ್ಕೆ ತಲುಪಿ, ಸಾವಿನ ಸಂಖ್ಯೆ 3,81,903ಕ್ಕೆ ಏರಿಕೆಯಾಗಿದ್ದು, ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 8,26,740ಕ್ಕೆ ಇಳಿಕೆಯಾಗಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ 1,03,570 ಮಂದಿ ಗುಣಮುಖರಾಗಿದ್ದು, ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,84,91,670ಕ್ಕೆ ತಲುಪಿದೆ.
ದೇಶದಲ್ಲಿ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 26,55,19,251 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.