ನವದೆಹಲಿ, ಜೂ.17 (DaijiworldNews/HR): 12ನೇ ತರಗತಿಯ ಫಲಿತಾಂಶವನ್ನು ಜುಲೈ 31ರೊಳಗೆ ಪ್ರಕಟಿಸಲಾಗುವುದು ಎಂದು ಕೇಂದ್ರ ಪ್ರೌಢಶಿಕ್ಷಣ ಮಂಡಳಿಯು (ಸಿಬಿಎಸ್ಇ) ಗುರುವಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಸಾಂಧರ್ಭಿಕ ಚಿತ್ರ
10 ಮತ್ತು 11ನೇ ತರಗತಿಯಲ್ಲಿ ಗಳಿಸಿರುವ ಅಂಕಗಳನ್ನು ಕೂ 12ನೇ ತರಗತಿ ಫಲಿತಾಂಶ ನಿರ್ಧರಿಸಲು ಪರಿಗಣಿಸಲಾಗುತ್ತದೆ ಎಂದು ಕೋರ್ಟ್ಗೆ ತಿಳಿಸಲಾಗಿದೆ ಎಂದು ವರದಿಯಾಗಿದೆ.
ಈ ಕುರಿತಂತೆ ಇಂದು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ ಅವರು ಸಿಬಿಎಸ್ಇ 10, 11 ಮತ್ತು 12 ನೇ ತರಗತಿ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡಲು ಮೌಲ್ಯಮಾಪನ ಮಾನದಂಡವನ್ನು ಸುಪ್ರೀಂ ಕೋರ್ಟ್ ಮುಂದೆ ತಿಳಿಸಿದ್ದಾರೆ.
ಇನ್ನು ಹತ್ತನೇ ಮತ್ತು 11ನೇ ತರಗತಿಗೆ, ಅವಧಿ ಪರೀಕ್ಷೆಗಳಲ್ಲಿ ಐದು ಪತ್ರಿಕೆಗಳಿಂದ ಮೂರರಲ್ಲಿ ಅತ್ಯುತ್ತಮವಾದ ಅಂಕಗಳನ್ನು ಪರಿಗಣಿಸಲಾಗುತ್ತದೆ ಎಂಬುದಾಗಿ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.
ಅಟಾರ್ನಿ ಜನರಲ್ ಕೆ ಕೆ ವೇಣುಗೋಪಾಲ ಸಾಂಪ್ರದಾಯಿಕವಾಗಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಅಂಕಗಳನ್ನು ನೀಡುವ ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವನ್ನು ತಳ್ಳಿಹಾಕಲು ಪ್ರತಿ ಶಾಲೆಗಳಿಗೆ ಫಲಿತಾಂಶ ಸಮಿತಿ ಇರುತ್ತದೆ ಎಂದು ಹೇಳಿದ್ದಾರೆ.