ನವದೆಹಲಿ, ಜೂ. 18 (DaijiworldNews/HR): ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಭಾರತದಲ್ಲಿ ಹೊಸದಾಗಿ 62,480 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಸಾಂಧರ್ಭಿಕ ಚಿತ್ರ
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 62,480 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 2,97,62,793 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 1,587 ಮಂದಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದು, ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ 3,83,490 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ ಒಂದೇ ದಿನ 88,977 ಮಂದಿ ಕೊರೊನಾ ಸೊಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಒಟ್ಟು 2,85,80,647 ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ದೇಶದಲ್ಲಿ ಇದುವರೆಗೆ ಇಟ್ಟು 26,89,60,399 ಮಂದಿಗೆ ಕೊರೊನಾ ಲಸಿಕೆಯನ್ನು ನೀಡಲಾಗಿದೆ.