ಹರಿಯಾಣ, ಜೂ. 18 (DaijiworldNews/HR): ಅನಾರೋಗ್ಯದಿಂದ ಬಳಲುತ್ತಿದ್ದ ಮಗು ಸಾವನ್ನಪಿರುವುದಾಗಿ ಎಂದು ವೈದ್ಯರು ಘೋಷಿಸಿ ಕುಟುಂಬಸ್ಥರಿಗೆ ಶವ ಹಸ್ತಾಂತರಿಸಿದ್ದು, ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಯುತ್ತಿದ್ದಂತೆ ಹೆತ್ತಮ್ಮನ ಗೋಳಾಟ ಮುಗಿಲು ಮುಟ್ಟಿದ್ದು ಈ ವೇಳೆ ಶವವಾಗಿ ಮಲಗಿದ್ದ ಮಗುವಿನ ದೇಹದಲ್ಲಿ ದಿಢೀರ್ ಚಲನೆ ಉಂಟಾದ ಘಟನೆ ಹರಿಯಾಣದ ಜಜ್ಜಾರ್ ಜಿಲ್ಲೆಯಲ್ಲಿ ನಡೆದಿದೆ.
ಹಿತೇಶ್ ಎಂಬುವವರ 7 ವರ್ಷದ ಮಗ ಕುನಾಲ್ ಶರ್ಮಾನಿಗೆ ಕಳೆದ ತಿಂಗಳು ಟೈಫಾಯಿಡ್ ಜ್ವರ ಕಾಣಿಸಿಕೊಂಡು ತೀವ್ರ ಅಸ್ವಸ್ಥನಾಗಿದ್ದ ಕುನಾಲ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿ ಸ್ಪಲ್ಪ ದಿನದ ಬಳಿಕ ಮಗು ಮೃತಪಟ್ಟಿದೆ ಎಂದು ದೆಹಲಿ ವೈದ್ಯರು ಘೋಷಿಸಿದ್ದರು. ಪಾಲಕರು ಕಣ್ಣೀರು ಹಾಕುತ್ತಲೇ ಸ್ವಗ್ರಾಮಕ್ಕೆ ಮೃತದೇಹ ತಂದು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದು, ಈ ನಡುವೆ ಪವಾಡವೇ ನಡೆದಿದ್ದು, ಶವವಾಗಿದ್ದ ಮಗು ಇದೀಗ ಜೀವಂತವಾಗಿದೆ.
ಮಗುವಿನ ತಾಯಿಯು ಮಗನ ದೇಹನ್ನೆಲ್ಲ ಸವರುತ್ತಾ ಎಳೆದಾಡಿದ್ದು, ಆ ವೇಳೆ ಆತನ ದೇಹದಲ್ಲಿ ಚಲನೆ ಕಂಡು ಬಂದಿದ್ದು, ಕೂಡಲೇ ತಂದೆ ಹಿತೇಶ್, ಮಗುವಿನ ಮೇಲೆ ಹಾಕಿದ್ದ ಬಟ್ಟೆ ತೆಗೆದು ಬಾಯಿಗೆ ಬಾಯಿ ಇಟ್ಟು ಉಸಿರು ಕೊಟ್ಟರು. ಆಗ ಮಗನ ದೇಹದಲ್ಲಿ ಮತ್ತಷ್ಟು ಮತ್ತಷ್ಟು ಚಲನ ಕಂಡು ಬಂದಿದ್ದು, ಎದೆಯ ಬಡಿತವೂ ಶುರುವಾಯಿತು.
ಇನ್ನು ಮಗುವನ್ನು ಎತ್ತಿಕೊಂಡು ಪಾಲಕರು ಸಮೀಪದ ಖಾಸಗಿ ಆಸ್ಪತ್ರೆಗೆ ಹೋಗಿದ್ದು,. ಪರೀಕ್ಷಿಸಿದ ವೈದ್ಯರು, ಮಗು ಬದುಕುವ ಸಾಧ್ಯತೆ ಶೇ.15 ಮಾತ್ರ ಎಂದು ಹೇಳಿದರೂ ಪಾಲಕರು ಚಿಕಿತ್ಸೆ ಕೊಡಲು ಹೇಳಿದ್ದರು.
20 ದಿನಗಳ ಕಾಲ ಚಿಕಿತ್ಸೆ ಕೊಟ್ಟಿದ್ದು, ಪವಾಡ ಎಂಬಂತೆ ಮಗು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಜೂ.15 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮನೆಯಲ್ಲಿ ಆರಾಮಾಗಿದೆ ಎಂದು ವರದಿಯಾಗಿದೆ.