ಕೋಲ್ಕತ್ತ, ಜೂ. 18 (DaijiworldNews/HR): ಟ್ವಿಟರ್ ಸಂಸ್ಥೆಯ ಮೇಲೆ ಪ್ರಭಾವ ಬೀರಲು ನಡೆಸಿದ ಯತ್ನ ವಿಫಲವಾಗಿದ್ದು, ಅದನ್ನು ದಮನಿಸುವುದಕ್ಕಾಗಿ ಕೇಂದ್ರ ಸರ್ಕಾರವು ಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಲಿದ್ದಾರೆ.
ಈ ಕುರಿತು ಮಾತನಡಿದ ಅವರು, "ಕೇಂದ್ರ ಸರ್ಕಾರವೂ ತಮ್ಮ ಸರ್ಕಾರದ ಜೊತೆಗೆ ಕೂಡ ಹೀಗೆಯೇ ನಡೆದುಕೊಂಡಿದ್ದು, ಅವರಿಗೆ ನನ್ನನ್ನು ಏನೂ ಮಾಡಲು ಆಗಲಿಲ್ಲ. ಯಾರನ್ನು ನಿಗ್ರಹಿಸಲು ಸಾಧ್ಯವಿಲ್ಲವೂ ಅವರ ಜೊತೆಗೆಲ್ಲಾ ಕೇಂದ್ರ ಹೀಗೆ ನಡೆದುಕೊಳ್ಳುತ್ತದೆ" ಎಂದು ಆರೋಪಿಸಿದ್ದಾರೆ.
ಇನ್ನು ರಾಷ್ಟ್ರದಾದ್ಯಂತ ಸಂಚಲನ ಮೂಡಿಸಿದ್ದ ಮುಸ್ಲಿಂ ವೃದ್ಧರೊಬ್ಬರಿಗೆ ಹಲ್ಲೆ ಮಾಡಿ, ಜೈ ಶ್ರೀರಾಮ್ ಹೇಳುವಂತೆ ಒತ್ತಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ ಟ್ವಿಟರ್ ಇಂಡಿಯಾ ಎಂಡಿಗೆ ಏಳು ದಿನದಲ್ಲಿ ಠಾಣೆಗೆ ಹಾಜರಾಗಿ ಹೇಳಿಕೆ ದಾಖಲಿಸುವಂತೆ ಘಾಜಿಯಾಬಾದ್ ಪೊಲೀಸರು ಶುಕ್ರವಾರ ನೋಟಿಸ್ ಜಾರಿ ಮಾಡಿದ್ದಾರೆ.
ಇದು ಕೋಮುಸಂಘರ್ಷಕ್ಕೆ ದಾರಿ ಮಾಡಿಕೊಡುವ ಪೋಸ್ಟ್ ಎಂದು ಪೊಲೀಸರು ಟ್ವಿಟರ್ ವಿರುದ್ಧ ಪ್ರಕರಣ ದಾಖಲಿಸಿದ್ದರು.