ರಾಯ್ ಪುರ,ಜೂ. 18 (DaijiworldNews/HR): ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಮಹಿಳಾ ನಕ್ಸಲರೊಬ್ಬರು ಹತರಾಗಿದ್ದು, ಎಕೆ47 ಬಂದೂಕು ಸೇರಿದಂತೆ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದ ಘಟನೆ ಛತ್ತೀಸ್ ಘಡದಲ್ಲಿ ಇಂದು ನಡೆದಿದೆ.
ಸಾಂಧರ್ಭಿಕ ಚಿತ್ರ
ನಕ್ಸಲರು ಛತ್ತೀಸ್ ಘಡದ ಬಸ್ತಾರ್ ಜಿಲ್ಲೆಯ ದಟ್ಟಾರಣ್ಯದಲ್ಲಿರುವ ಕುರಿತು ಮಾಹಿತಿ ಪಡೆದ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಭದ್ರತಾ ಪಡೆಗಳು ಆಗಮಿಸುತ್ತಿದ್ದಂತೆಯೇ ನಕ್ಸಲರು ಗುಂಡಿನ ದಾಳಿ ಆರಂಭಿಸಿದ್ದು, ಭದ್ರತಾಪಡೆಗಳೂ ಕೂಡ ಪ್ರತಿದಾಳಿ ನಡೆಸಿವೆ.
ಇನ್ನು ಗುಂಡಿನ ದಾಳಿಗೆ ಮಹಿಳಾ ನಕ್ಸಲರೊಬ್ಬರು ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನಾ ಸ್ಥಳದಲ್ಲಿ ಎಕೆ 47 ಬಂದೂಕು, ಪಿಸ್ತೂಲ್ಗಳು, ಬುಲೆಟ್ ಮ್ಯಾಗಜಿನ್ಗಳು ಸೇರಿದಂತೆ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿವೆ.