ನವದೆಹಲಿ, ಜೂ 18 (DaijiworldNews/PY): ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಅವರ ಶುಕ್ರವಾರ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ನಿವಾಸದಲ್ಲಿ ಭೇಟಿಯಾಗಿದ್ದು, ಮಾತುಕತೆ ನಡೆಸಿದ್ದಾರೆ.
ಈ ಸಂದರ್ಭ ರಾಹುಲ್ ಗಾಂಧಿ ಅವರೂ ಕೂಡಾ ಉಪಸ್ಥಿತರಿದ್ದರು.
ಕಾಂಗ್ರೆಸ್ ಹಾಗೂ ಡಿಎಂಕೆ ತಮಿಳುನಾಡು ವಿಧಾನಸಭಾ ಚುನಾವಣೆಯ ಸಂದರ್ಭ ಮೈತ್ರಿ ಮಾಡಿಕೊಂಡಿತ್ತು. ಚುನಾವಣೆಯಲ್ಲಿ ಡಿಎಂಕೆ ಜಯ ಗಳಿಸಿದ ಬಳಿಕ ಇದೇ ಮೊದಲ ಬಾರಿ ಸ್ಟಾಲಿನ್ ಹಾಗೂ ಸೋನಿಯಾ ಗಾಂಧಿ ಚರ್ಚೆ ನಡೆಸಿರುವುದಾಗಿ ವರದಿ ತಿಳಿಸಿದೆ.
ರಾಜ್ಯದಲ್ಲಿನ ನೂತನ ಸರ್ಕಾರದ ಹೊಸ ಯೋಜನೆಗಳು ಸೇರಿದಂತೆ ನೀತಿಗಳ ಕುರಿತು ಸೋನಿಯಾ ಗಾಂಧಿ ಜೊತೆ ಚರ್ಚಿಸಲಾಯಿತು ಎಂದು ವರದಿ ವಿವರಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ನಾನು ಇಂದು ತಮಿಳುನಾಡು ಸಿಎಂ ಎಂ. ಕೆ ಸ್ಟಾಲಿನ್ ಹಾಗೂ ದುರ್ಗಾವತಿ ಸ್ಟಾಲಿನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದಾಗಿ ತಿಳಿಸಿದ್ದಾರೆ.
ಕೊರೊನಾ ಪರಿಸ್ಥಿತಿ ನಿರ್ವಹಣೆ ಹಾಗೂ ರಾಜ್ಯಕ್ಕೆ ಅವಶ್ಯಕವಿರುವ ಹಣಕಾಸು ನೆರವಿನ ಹಿನ್ನೆಲೆ ಇಂದು ಎಂ.ಕೆ ಸ್ಟಾಲಿನ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದು ತೀರ್ಮಾನವಾಗಿದೆ.