ಬೆಂಗಳೂರು, ಜೂ. 18 (DaijiworldNews/SM): ರಾಜ್ಯದಲ್ಲಿ ಶುಕ್ರವಾರ 5783 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 168 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.
ಇನ್ನು ರಾಜ್ಯದಲ್ಲಿ 15290 ಮಂದಿ ಗುಣಮುಖರಾಗಿ ಶುಕ್ರವಾರ ಬಿಡುಗಡೆಗೊಂಡಿದ್ದಾರೆ. ಇಲ್ಲಿಯ ತನಕ 2796121 ಮಂದಿಯಲ್ಲ್ಲಿ ಸೋಂಕು ಪತ್ತೆಯಾಗಿದ್ದು, 2625447 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 33602 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. 137050 ಮಂದಿ ಪ್ರಸ್ತುತ ಜಿಲ್ಲೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ.
ಬೆಂಗಳೂರು ನಗರದಲ್ಲಿ 1100 ಅತಿ ಹೆಚ್ಚು ಪ್ರಕರಣಗಳು ವರದಿಯಾಗಿದೆ.