ನವದೆಹಲಿ, ಜೂ 19 (DaijiworldNews/PY): ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 60,753 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,98,23,546ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಕಳೆದ ಕಳೆದ 24 ಗಂಟೆಗಳಲ್ಲಿ 60,753 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. 1,647 ಮಂದಿ ಸೋಂಕಿಗೆ ಬಲಿಯಾಗಿದ್ದು, ಈವರೆಗೆ ದೇಶದಲ್ಲಿ 3,85,137 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇನ್ನು ದೇಶದಲ್ಲಿ 7,60,019 ಕೊರೊನಾ ಸಕ್ರಿಯ ಪ್ರಕರಗಳಿವೆ. ಕಳೆದ 24 ಗಂಟೆಯಲ್ಲಿ 97,743 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಒಟ್ಟು 2,86,78,390 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಶುಕ್ರವಾರ 19,02,009 ಮಂದಿಗೆ ಕೊರೊನಾ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಇಲ್ಲಿಯವರೆಗೆ 38,92,07,637 ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 26,89,60,399 ಮಂದಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.