ಬೆಂಗಳೂರು, ಜೂ. 19 (DaijiworldNews/HR): ಕರ್ನಾಟಕದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 5815 ಕೊರೊನಾ ಸೋಂಕು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 161 ಮಂದಿ ಸಾವನ್ನಪ್ಪಿದ್ದಾರೆ.
ಸಾಂಧರ್ಭಿಕ ಚಿತ್ರ
ಕರ್ನಾಟಕ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ವರದಿ ಪ್ರಕಾರ, 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 5815 ಕೊರೊನಾ ಸೋಂಕು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 161 ಮಂದಿ ಸಾವನ್ನಪ್ಪಿದ್ದು,ಇಂದು ಕೂಡ 11832 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇನ್ನು ಕರ್ನಾಟಕದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 28,01,936 ಕ್ಕೆ ಏರಿಕೆಯಾಗಿದ್ದು, ಇಂದು 11,832 ಜನ ಗುಣಮುಖರಾಗಿದ್ದು, ಇದುವರೆಗೆ 26,37,279 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ರಾಜ್ಯದಲ್ಲಿ ಒಟ್ಟು 1,30,872 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೆ ಒಟ್ಟು 33,763 ಸೋಂಕಿತರು ಸಾವನ್ನಪ್ಪಿದ್ದು, ಪಾಸಿಟಿವಿಟಿ ದರ ಶೇಕಡ 3.38 ರಷ್ಟು ಇದೆ.