ಹಾಸನ, ಜೂ.19 (DaijiworldNews/HR): ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ಓರ್ವನ ಗಂಭೀರ ಗಾಯಗೊಂಡ ಘಟನೆ ಹಾಸನ ಹೊರ ವಲಯ ಕೆಂಚಟ್ಟಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ- 75 ರಲ್ಲಿ ಶನಿವಾರ ಸಂಜೆ ನಡೆದಿದೆ.
ಬೆಂಗಳೂರಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೃತರಲ್ಲಿ ಇಬ್ಬರ ಗುರುತು ಪತ್ತೆಯಾಗಿದ್ದು, ಬೆಳ್ತಂಗಡಿ ಮೂಲದ ಸಹೋದರರಾದ ಯೋಗೇಶ್ ಮತ್ತು ಜಯಪ್ರಕಾಶ್ ಎಂದು ಗುರುತಿಸಲಾಗಿದೆ.
ಕ್ವಿಡ್ ಕಾರು ಕೆಂಚಟ್ಟಹಳ್ಳಿ ಬಳಿ ಹಂಪ್ಸ್ ಇದ್ದ ಕಾರಣ ಲಾರಿ ಚಾಲಕ ದಿಢೀರ್ ಬ್ರೇಕ್ ಹಾಕಿದ ಪರಿಣಾಮ ಲಾರಿ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ.
ಇನ್ನು ಗಂಭೀರಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ಹಾಸನ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.