ಬೆಂಗಳೂರು, ಜೂ 20 (DaijiworldNews/PY): "ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರ ಹಾಗೂ ಸೋಮವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ" ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 20ರಂದು ದಕ್ಷಿಣ ಕನ್ನಡ ಸೇರಿದಂತೆ ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಹಾವೇರಿ, ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಎರಡು ದಿನ ಮಳೆ ಮುಂದುವರೆಯಲಿದ್ದು, ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಭಾಗದಲ್ಲಿ ಸೋಮವಾರದ ತನಕವೂ ಮಳೆ ಮುಂದುವರೆಯಲಿದೆ. ಕರಾವಳಿಯಲ್ಲಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಅಲೆಗಳು 3.9 ಮೀಟರ್ನಷ್ಟು ಎತ್ತರಕ್ಕೆ ಏಳುತ್ತಿವೆ. ಈ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.