ತೀರ್ಥಹಳ್ಳಿ, ಜೂ. 20 (DaijiworldNews/HR): ಯುವತಿಯನ್ನು ಒತ್ತಾಯ ಪೂರ್ವಕವಾಗಿ ಮದುವೆಯಾಗಿ ಅತ್ಯಾಚಾರವೆಸಗಿದ ಆರೋಪದಡಿ ಯುವಕನೊಬ್ಬನ್ನು ಪೊಲೀಸರು ಬಂಧಿಸಿದ ಘಟನೆ ತೀರ್ಥಹಳ್ಳಿ ಪಟ್ಟಣದ ಸಮೀಪದ ನಡೆದಿದೆ.
ಸಾಂಧರ್ಭಿಕ ಚಿತ್ರ
ಬಂಧಿತ ಆರೋಪಿಯನ್ನು ತೀರ್ಥಹಳ್ಳಿ ತುಂಗಾ ಕಾಲೇಜಿನ ಸಮೀಪದ ವಾಸಿ ಕಮಲ್ ಎಂದು ಗುರುತಿಸಲಾಗಿದೆ.
ಆರೋಪಿ ಕಮಲ್ ಜೂ.11ರಂದು ಅಪ್ರಾಪ್ತ ಯುವತಿಯೋರ್ವಳನ್ನು ಪುಸಲಾಯಿಸಿ ಒತ್ತಾಯಪೂರ್ವಕವಾಗಿ ಕರೆದುಕೊಂಡು ಹೋಗಿ ಪಟ್ಟಣದ ಸಮೀಪದ ದೇವಸ್ಥಾನವೊಂದರಲ್ಲಿ ಬೆಳಗಿನ ಜಾವ ಬಲಾತ್ಕಾರವಾಗಿ ತಾಳಿ ಕಟ್ಟಿದ್ದಾನೆ ಎನ್ನಲಾಗಿದೆ.
ಇನ್ನು 17 ವರ್ಷದ ವಯಸ್ಸಿನ ಯುವತಿಯನ್ನು ಪ್ರೀತಿಸುವ ನೆಪದಲ್ಲಿ ಮದುವೆಯಾಗಿದ್ದು, ಬಳಿಕ ತೀರ್ಥಹಳ್ಳಿ ಪಟ್ಟಣದ ಆರಗ ರಸ್ತೆಯಲ್ಲಿ ಸುರಾನಿ ಸಮೀಪದ ಪರಿಚಯದವರ ತೋಟಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ ಎಂದು ಯುವತಿಯ ಪೋಷಕರು ಮತ್ತು ಯುವತಿ ದೂರು ನೀಡಿದ್ದಾರೆ.
ಯುವತಿಯ ದೂರಿನ ಮೇರೆಗೆ ಅಪ್ರಾಪ್ತ ಯುವತಿಯ ಮೇಲೆ ಲೈಂಗಿಕ ಕಿರುಕುಳದ ಪ್ರಕರಣ ಪೋಸ್ಕೋ ಕೇಸ್ ಹಾಕಲಾಗಿದೆ.
ಇನ್ನು ಆರೋಪಿಯ ವಿರುದ್ದ ಅತ್ಯಾಚಾರ ಪ್ರಕರಣದಲ್ಲಿ ಕೇಸ್ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ಜೈಲಿಗೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.