ಬೆಂಗಳೂರು, ಜೂ. 20 (DaijiworldNews/HR): "ಅನ್ಲಾಕ್ ವಿಚಾರದಲ್ಲಿ ಕರ್ನಾಟಕ ಸರ್ಕಾರ ಆತುರದ ನಿರ್ಧಾರ ತೆಗೆದುಕೊಂಡಿದ್ದು, ಮುಂದೆ ಆಗುವ ಅನಾಹುತದ ಹೊಣೆಯನ್ನು ಸರ್ಕಾರ ಹೊರಬೇಕು" ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕೊರೊನಾ ಪ್ರಕರಣಗಳು ಕಡಿಮೆ ಇರುವ ಹದಿನಾರು ಜಿಲ್ಲೆಗಳಲ್ಲಿ ಅನ್ಲಾಕ್ ಮಾಡಲಾಗಿದ್ದು, ಹದಿಮೂರು ಜಿಲ್ಲೆಗಳಲ್ಲಿ ನಿರ್ಬಂಧಗಳು ಮುಂದುವರೆಸಲಾಗಿದೆ. ಹೀಗಾಗಿ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆ ನಡುವೆ ಜನರ ಓಡಾಟ ಇರುವುದರಿಂದ ಸೋಂಕು ಹರಡುವ ಸಾಧ್ಯತೆ ಇದ್ದು, ಇದುವರೆಗೂ ಇದ್ದ ನಿರ್ಬಂಧಗಳನ್ನೇ ಇನ್ನೂ ಒಂದು ವಾರ ರಾಜ್ಯದಲ್ಲಿ ಮುಂದುವರೆಸಿದ್ದರೆ ಅನುಕೂಲವಾಗುತ್ತಿತ್ತು" ಎಂದರು.
ಇನ್ನು "ಈ ಅನ್ಲಾಕ್ ನಿಂದಾಗಿ ರಾಜ್ಯದಲ್ಲಿ ಮುಂದೆ ಏನಾಗುತ್ತೋ ಎಂಬುದನ್ನು ಕಾದು ನೋಡಬೇಕಿದೆ. ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವ ಮೂಲಕ ಸೋಂಕು ಹರಡದಂತೆ ತಡೆಯುವ ಪ್ರಯತ್ನ ಮುಂದುವರೆಸಬೇಕು. ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು" ಎಂದು ಹೇಳಿದ್ದಾರೆ.