ಚೆನ್ನೈ,ಜೂ. 20 (DaijiworldNews/HR): ಕೊರೊನಾ ಪ್ರಕರಣ ತಡೆಗಟ್ಟುವ ಹಿನ್ನಲೆಯಲ್ಲಿ ತಮಿಳುನಾಡು ಸರ್ಕಾರ ಇನ್ನೂ ಒಂದು ವಾರಗಳ ಕಾಲ ಲಾಕ್ ಡೌನ್ ವಿಸ್ತರಿಸಲು ನಿರ್ಧರಿಸಿರುವುದಾಗಿ ಭಾನುವಾರ ಘೋಷಿಸಿದೆ.
ತಮಿಳುನಾಡಿನಲ್ಲಿ ಮತ್ತಷ್ಟು ಕೊರೊನಾ ನಿರ್ಬಂಧಗಳನ್ನು ಸಡಿಲಿಕೆ ಮಾಡುವ ಮೂಲಕ ಜೂನ್ 28ರವರೆಗೆ ಲಾಕ್ಡೌನ್ ವಿಸ್ತರಿಸಿರುವುದಾಗಿ ಹೇಳಿದೆ.
ಇನ್ನು ಚೆನ್ನೈ, ತಿರುವಳ್ಳೂರ್, ಕಾಂಚಿಪುರಂ ಹಾಗೂ ಚೆಂಗಲ್ ಪೇಟ್ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಶೇ.50ರಷ್ಟು ಸಾಮರ್ಥ್ಯದೊಂದಿಗೆ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಲಿದ್ದು, ಮೆಟ್ರೋ ರೈಲು ಸಂಚಾರಕ್ಕೂ ಅನುಮತಿ ನೀಡಿರುವುದಾಗಿ ತಿಳಿಸಿದೆ.
ತಮಿಳುನಾಡಿನಲ್ಲಿ ಸೋಂಕು ಪ್ರಕರಣ ತಡೆಗಟ್ಟುವ ನಿಟ್ಟಿನಲ್ಲಿ ಕೆಲವೊಂದು ನಿರ್ಬಂಧ ಸಡಿಲಿಕೆ ಮಾಡಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದ್ದು, ಸಿನಿಮಾ ಮತ್ತು ಟೆಲಿವಿಷನ್ ಸೀರಿಯಲ್ ಶೂಟಿಂಗ್ ಅನ್ನು ಗರಿಷ್ಠ ನೂರು ಮಂದಿ ಮಿತಿಯೊಂದಿಗೆ ಆರಂಭಿಸಲು ಅನುಮತಿ ನೀಡಿದೆ ಎನ್ನಲಾಗಿದೆ.