ಬೆಂಗಳೂರು, ಜೂ 21 (DaijiworldNews/PY): "ಸಾಂಕ್ರಾಮಿಕದ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಯೋಗಾಭ್ಯಾಸದ ಪಾತ್ರ ಮಹತ್ವದ್ದಾಗಿದೆ. ಆರೋಗ್ಯಪೂರ್ಣ ಶರೀರ, ಮನಸ್ಸುಗಳ ಜೊತೆಗೆ ಸಾರ್ಥಕ ಜೀವನ ರೂಪಿಸಿಕೊಳ್ಳಲು ನೆರವಾಗುವ ಯೋಗ ಎಲ್ಲರ ಜೀವನದ ಅವಿಭಾಜ್ಯ ಅಂಗವಾಗಲಿ" ಎಂದು ಸಿಎಂ ಬಿ. ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಎಲ್ಲರಿಗೂ ಅಂತಾರಾಷ್ಟ್ರೀಯ ಯೋಗ ದಿನದ ಹಾರ್ದಿಕ ಶುಭಾಶಯಗಳು. ಜೀವನದ ಸಮನ್ವಯತೆಯನ್ನೂ ನಮ್ಮ ಹಿರಿಯರು ಯೋಗವೆಂದೇ ಕರೆದರು. ಸಾಂಕ್ರಾಮಿಕದ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಯೋಗಾಭ್ಯಾಸದ ಪಾತ್ರ ಮಹತ್ವದ್ದಾಗಿದೆ. ಆರೋಗ್ಯಪೂರ್ಣ ಶರೀರ, ಮನಸ್ಸುಗಳ ಜೊತೆಗೆ ಸಾರ್ಥಕ ಜೀವನ ರೂಪಿಸಿಕೊಳ್ಳಲು ನೆರವಾಗುವ ಯೋಗ ಎಲ್ಲರ ಜೀವನದ ಅವಿಭಾಜ್ಯ ಅಂಗವಾಗಲಿ" ಎಂದಿದ್ದಾರೆ.
"ಕೊರೋನಾ ಸಂಕಷ್ಟದ ಈ ಸಂದರ್ಭದಲ್ಲಿ ಯೋಗದ ಪಾತ್ರ ಮಹತ್ವವಾದದು. ಯೋಗಾಭ್ಯಾಸದಿಂದ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವೂ ಬಲಗೊಳ್ಳುತ್ತದೆ. ವ್ಯಕ್ತಿತ್ವ ವಿಕಸನ, ಏಕಾಗ್ರತೆಯ ಜೊತೆಗೆ ಸಮಾಜ ನಿರ್ಮಾಣದಲ್ಲಿಯೂ ಯೋಗ ಸಹಕಾರಿಯಾಗಿದೆ. ಯೋಗ, ವ್ಯಾಯಾಮಗಳು ನಮ್ಮ ಜೀವನಕ್ರಮವಾಗಿರಲಿ" ಎಂದು ಹೇಳಿದ್ದಾರೆ.
ಆಯುಷ್ ಮಂತ್ರಾಲಯ ಭಾರತ ಸರ್ಕಾರ ರಾಜ್ಯದ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ವೈದ್ಯಕೀಯ ಶಿಕ್ಷಣ ಇಲಾಖೆ ಆಯುಷ್ ಇಲಾಖೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ 7ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಯೋಗ ಫಾರ್ ವೆಲ್ನೆಸ್, ಬಿ ವಿತ್ ಯೋಗ ಬಿ ಎಟ್ ಹೋಮ್ ಎನ್ನುವ ಘೋಷವಾಕ್ಯದೊಂದಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಉದ್ಘಾಟನೆ ಮಾಡಿದರು.
ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವ ಸುಧಾಕರ್ ಅವರು ಭಾಗವಹಿಸಿದ್ದು, ಸಿಎಂ ಜೊತೆ ಯೋಗ ಮಾಡಿದರು.