ನವದೆಹಲಿ, ಜೂ.21 (DaijiworldNews/HR): ಕೊರೊನಾ ಸೋಂಕಿನ ಪ್ರಕರಣ ದೇಶದಲ್ಲಿ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 53,256 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.
ಸಾಂಧರ್ಭಿಕ ಚಿತ್ರ
ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 53,256 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,99,35,221 ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿಗೆ 1,422 ಜನರು ಬಲಿಯಾಗಿದ್ದು, ದೇಶದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 3,88,135 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 78,190 ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ದೇಶದಲ್ಲಿ ಈವರೆಗೆ ಒಟ್ಟು 28,00,36,898 ಮಂದಿಗೆ ಕೊರೊನಾ ಲಸಿಕೆಯನ್ನು ನೀಡಲಾಗಿದೆ.