ಬೆಂಗಳೂರು,ಜೂ.21 (DaijiworldNews/HR): "ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ವಿಧಿಸಲಾಗಿದ್ದ ನಿರ್ಬಂಧಗಳನ್ನು, ಜಿಲ್ಲಾವಾರು ಪರಿಸ್ಥಿತಿಗಳನ್ನು ಪರಿಗಣಿಸಿ ಸಡಿಲಿಕೆ ಮಾಡಲಾಗಿದ್ದು, ಜನತೆ ಸೋಂಕಿನ ಅಪಾಯದ ಕುರಿತು ನಿರ್ಲಕ್ಷ್ಯ ಮಾಡಬೇಡಿ" ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ವಿಧಿಸಲಾಗಿದ್ದ ನಿರ್ಬಂಧಗಳನ್ನು, ಜಿಲ್ಲಾವಾರು ಪರಿಸ್ಥಿತಿಗಳನ್ನು ಪರಿಗಣಿಸಿ, ಅದಕ್ಕನುಗುಣವಾಗಿ ಸಡಿಲಿಸಲಾಗಿದ್ದು, ಸಾಮಾನ್ಯ ಜನಜೀವನಕ್ಕೆ ಅನುಕೂಲ ಕಲ್ಪಿಸಲು ಈ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದ್ದು, ಸೋಂಕಿನ ಅಪಾಯದ ಕುರಿತು ನಿರ್ಲಕ್ಷ್ಯ ಖಂಡಿತಾ ಬೇಡ" ಎಂದಿದ್ದಾರೆ.
ಇನ್ನು ಎಲ್ಲರೂ ಕೂಡ ಸಾಧ್ಯವಾದಷ್ಟು ಮನೆಯಲ್ಲೇ ಇರಿ, ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಿ. ಹೊರಗೆ ಬರುವಾಗ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಶುಚಿತ್ವ ಪಾಲಿಸಿ, ಸರದಿ ಬಂದಾಗ ಲಸಿಕೆ ಪಡೆದುಕೊಳ್ಳಿ. ಮುನ್ನೆಚ್ಚರಿಕೆ ವಹಿಸಿ, ನಿಯಮಗಳನ್ನು ಅನುಸರಿಸಿ, ಸರ್ಕಾರದೊಂದಿಗೆ ಸಹಕರಿಸಿ" ಎಂದು ಮನವಿ ಮಾಡಿಕೊಂಡಿದ್ದಾರೆ.