ತಮಿಳುನಾಡು, ಜೂ 21 (DaijiworldNews/PY): ಅಕ್ರಮ ಪಟಾಕಿ ಉತ್ಪಾದನೆ ಮಾಡುತ್ತಿದ್ದ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿ, ಮೂವರು ಗಾಯಗೊಂಡಿರುವ ಘಟನೆ ತಮಿಳುನಾಡಿನ ವಿರುಧುನಗರ ಜಿಲ್ಲೆಯ ಶಿವಕಾಶಿ ಸಮೀಪ ನಡೆದಿದೆ.
ಶಿವಕಾಶಿ ಸಮೀಪ ಥೈಯಿಲ್ಪಟ್ಟಿ ಆರ್ಟಿಸ್ಟ್ ಕಾಲೋನಿಯಲ್ಲಿ ಸೂರ್ಯ ಎಂಬವರು ಜನರನ್ನು ಬಳಸಿಕೊಂಡು ಅಕ್ರಮವಾಗಿ ಪಟಾಕಿ ತಯಾರಿಸುತ್ತಿದ್ದ. ಈ ಸಂದರ್ಭ ಪಟಾಕಿ ಸ್ಪೋಟಗೊಂಡಿದ್ದು, ಬೆಂಕಿ ಅವಘಡ ಸಂಭವಿಸಿದೆ. ಘಟನೆಯ ಪರಿಣಾಮ ಮೂರು ಮನೆಗಳು ಹಾನಿಗೊಳಗಾಗಿವೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳ ಧಾವಿಸಿ ಬೆಂಕಿ ನಿಯಂತ್ರಿಸಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.