ಅಹಮದಾಬಾದ್, ಜೂ.21 (DaijiworldNews/HR): ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಕೊರೊನಾ ಲಸಿಕೆ ನೀಡುವ ಪ್ರಕ್ರಿಯೆಯ ವೇಗವನ್ನು ಹೆಚ್ಚಿಸುವುದಕ್ಕೆ ಕೇಂದ್ರ ಸರ್ಕಾರ ನಿರ್ಧರಿಸಿದೆ' ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, "18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಇಂದಿನಿಂದ ಉಚಿತ ಕೊರೊನಾ ಲಸಿಕೆ ನೀಡಲು ಪ್ರಧಾನಿಯವರು ನಿರ್ಧರಿಸಿದ್ದು, ಲಸಿಕೆ ಅಭಿಯಾನದ ವೇಗ ಹೆಚ್ಚಿಸುವ ಮೂಲಕ ಪ್ರತಿಯೊಬ್ಬರಿಗೂ ಲಸಿಕೆ ತಲುಪಿಸುವ ಗುರಿಯನ್ನು ಸಾಧಿಸಲಾಗುತ್ತದೆ" ಎಂದರು.
ಇನ್ನು "ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕೊರೊನಾ ವಿರುದ್ಧದ ಹೋರಾಟದಲ್ಲಿ ಲಸಿಕೆ ನೀಡಿಕೆಯ ಮಹತ್ವದ ಪಯಣ ಆರಂಭವಾಗಿದ್ದು, ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ದೇಶದೆಲ್ಲೆಡೆ ಉಚಿತ ಲಸಿಕೆ ನೀಡುವ ಅಭಿಯಾನ ಪ್ರಾರಂಭಿಸಲಗಿದ್ದು, ಲಸಿಕೆ ನೀಡುವ ಅಭಿಯಾನದಲ್ಲಿ ಭಾರತ ಈಗಾಗಲೇ ಅಗ್ರಸ್ಥಾನದಲ್ಲಿದೆ" ಎಂದು ಹೇಳಿದ್ಡಾರೆ.