ತುಮಕೂರು, ಜೂ 21 (DaijiworldNews/PY): "ಪಕ್ಷ ಅಧಿಕಾರಕ್ಕೆ ಬಂದ ಸಂದರ್ಭ ಸಿಎಂ ಯಾರಾಗಬೇಕು ಎನ್ನುವುದನ್ನು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸುತ್ತದೆ" ಎಂದು ಶಾಸಕ ಜಿ.ಪರಮೇಶ್ವರ ತಿಳಿಸಿದರು.
ತುಮಕೂರಿನಲ್ಲಿ ಮಾತನಾಡಿದ ಅವರು, "ವಿಪಕ್ಷ ನಾಯ ಸಿದ್ದರಾಮಯ್ಯ ಅವರೇ ಮುಂದಿನ ಸಿಎಂ ಎಂದು ಜಮೀರ್ ಅಹಮದ್ ಹೇಳಿಕೆ ಅವರ ವೈಯುಕ್ತಿ ಅಭಿಪ್ರಾಯವೇ ಹೊರತು ಪಕ್ಷದ ನಿರ್ಧಾರವಲ್ಲ. ಸಿಎಂ ಅಭ್ಯರ್ಥಿಯನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಲಾಗುತ್ತದೆ" ಎಂದು ಹೇಳಿದರು.
"ವಿಧಾನಸಭೆ ಚುನಾವಣೆಗೆ ಸಾಕಷ್ಟು ಸಮಯವಿದೆ. ಇನ್ನೂ ಚುನಾವಣೆಯೇ ನಡೆದಿಲ್ಲ. ಹಾಗಾಗಿ ಈಗಲೇ ಸಿಎಂ ಯಾರಾಗಬೇಕು ಎನ್ನುವುದನ್ನು ಹೇಗೆ ತೀರ್ಮಾನಿಸಲಾಗುತ್ತದೆ. ಸದ್ಯ ಈ ಬಗೆಗಿನ ಚರ್ಚೆ ಅಪ್ರಸ್ತುತ" ಎಂದರು.