ಬೆಂಗಳೂರು, ಜೂ. 21 (DaijiworldNews/SM): ರಾಜ್ಯದಲ್ಲಿ ಲಸಿಕೆ ವಿತರಣೆ ದಿನೇ ದಿನೆ ಹೆಚ್ಚಳವಾಗುತ್ತಿದ್ದು, ಸದ್ಯ ಲಸಿಕೆ ಅಭಿಯಾನದಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಟ್ವಿಟರ್ ನಲ್ಲಿ ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ. ಇಂದು ಒಂದೇ ದಿನದಲ್ಲಿ 78 ಲಕ್ಷಕ್ಕೂ ಅಧಿಕ ಮಂದಿಗೆ ಕೋವಿಡ್ ಲಸಿಕೆ ವಿತರಿಸಲಾಗಿದೆ. ಆ ಮೂಲಕ ದೇಶದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಿದೆ. ಕರ್ನಾಟಕದಲ್ಲಿ 10 ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ ನೀಡಲಾಗಿದ್ದು, ದೇಶದಲ್ಲಿ ನಮ್ಮ ರಾಜ್ಯ ಎರಡನೇ ಸ್ಥಾನದಲ್ಲಿದೆ ಎಂದು ಸಚಿವ ಡಾ. ಸುಧಾಕರ್ ಮಾಹಿತಿ ಹಂಚಿಕೊಂಡಿದ್ದಾರೆ.
ಕರ್ನಾಟಕದಲ್ಲಿ 1.96 ಕೋಟಿ ಲಸಿಕೆ ಇಲ್ಲಿಯ ತನಕ ವಿತರಿಸಲಾಗಿದೆ ಎಂದು ಡಾ. ಸುಧಾಕರ್ ಹೇಳಿದ್ದಾರೆ.