ನವದೆಹಲಿ, ಜೂ.22 (DaijiworldNews/HR): ಭಾರತದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ನಿರಂತರ ಇಳಿಕೆಯಾಗುತ್ತಿದ್ದು, 91 ದಿನಗಳಲ್ಲಿ ಮೊದಲ ಬಾರಿಗೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 42,640 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಸಾಂಧರ್ಭಿಕ ಚಿತ್ರ
ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 42,640 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,99,77,861ಕ್ಕೆ ತಲುಪಿದೆ. ಇದೇ ಅವಧಿಯಲ್ಲಿ 1,167 ಮಂದಿ ಸೋಂಕಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 3,89,302ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ 81,839 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,89,26,038ಕ್ಕೆ ತಲುಪಿದೆ.
ದೇಶದಲ್ಲಿ ಸೋಮವಾರ ಒಂದೇ ದಿನದಲ್ಲಿ 86.16 ಲಕ್ಷ ಕೊರೊನಾ ಲಸಿಕೆ ಡೋಸ್ ಗಳನ್ನು ನೀಡಿದ್ದು, ಇದು ವಿಶ್ವದ ಯಾವುದೇ ಭಾಗದಲ್ಲಿ ಸಾಧಿಸಿದ ಅತಿ ಹೆಚ್ಚು ಒಂದೇ ದಿನದ ಲಸಿಕೆ ಎಣಿಕೆಯಾಗಿದೆ.
ಇನ್ನು ಭಾರತದಲ್ಲಿ ಇದುವರೆಗೆ ಒಟ್ಟು 28,87,66,201 ಮಂದಿಗೆ ಲಸಿಕೆಯನ್ನು ನೀಡಲಾಗಿದೆ.